BREAKING: ಶಿವಮೊಗ್ಗ ದಸರಾ ಸಂಭ್ರಮದಲ್ಲಿ ನಟ ಶಿವರಾಜ್ ಕುಮಾರ್ ಭಾಗಿ: ಹೇಮಂತ್, ಅನುರಾಧ ಭಟ್ ತಂಡದಿಂದ ಮ್ಯೂಸಿಕಲ್ ನೈಟ್

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಶಿವಮೊಗ್ಗ ದಸರಾ ಅಂಗವಾಗಿ ಆಗಸ್ಟ್ 28ರ ಭಾನುವಾರ ಸಂಜೆ 5ಗಂಟೆಗೆ ನಗರದ ಪ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಲಾಗಿರುವ ಮ್ಯೂಸಿಕಲ್ ನೈಟ್ ಅದ್ದೂರಿ ಕಾರ್ಯಕ್ರಮಕ್ಕೆ ಖ್ಯಾತ ನಟ ಡಾ.ಶಿವರಾಜ್ ಕುಮಾರ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

ಈ ಮ್ಯೂಸಿಕಲ್ ನೈಟ್ ಅದ್ದೂರಿ ಕಾರ್ಯಕ್ರಮಕ್ಕೆ ನಾಡಿನ ಹೆಸರಾಂತ ಗಾಯಕರಾದ ಹೇಮಂತಕುಮಾರ್, ಖ್ಯಾತ ಗಾಯಕಿ ಅನುರಾಧ ಭಟ್ ಮತ್ತು ತಂಡದವರು ಆಗಮಿಸಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಆಗಮಿಸಲಿರುವರು.

ವಿಶೇಷ ಆಹ್ವಾನಿತರಾಗಿ ಮಾಜಿ ಶಾಸಕ ಕೆ. ಬಿ. ಪ್ರಸನ್ನಕುಮಾರ್, ಮಾಜಿ ಸಂಸದ ಆಯನೂರ್ ಮಂಜುನಾಥ್, ಮಾಜಿ ಶಾಸಕ ಹೆಚ್. ಎಂ. ಚಂದ್ರಶೇಖರಪ್ಪ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ನಗರದ ನಾಗರಿಕರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read