HomeLatest NewsBREAKING: ಫಿಲಂ ಚೇಂಬರ್ ಅಧ್ಯಕ್ಷರಾಗಿ ನಟಿ ಜಯಮಾಲಾ ಆಯ್ಕೆ: ಭಾ.ಮಾ. ಹರೀಶ್ ವಿರುದ್ಧ ಗೆಲುವು

BREAKING: ಫಿಲಂ ಚೇಂಬರ್ ಅಧ್ಯಕ್ಷರಾಗಿ ನಟಿ ಜಯಮಾಲಾ ಆಯ್ಕೆ: ಭಾ.ಮಾ. ಹರೀಶ್ ವಿರುದ್ಧ ಗೆಲುವು

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಫಿಲಂ ಚೇಂಬರ್) ನೂತನ ಅಧ್ಯಕ್ಷರಾಗಿ ಹಿರಿಯ ನಟಿ ಜಯಮಾಲಾ ಆಯ್ಕೆಯಾಗಿದ್ದಾರೆ. 170 ಮತಗಳ ಅಂತರದಿಂದ ನಟಿ ಜಯಮಾಲಾ ಗೆಲುವು ಸಾಧಿಸಿದ್ದಾರೆ.

ಭಾ.ಮಾ. ಹರೀಶ್ ಅವರ ವಿರುದ್ಧ ಜಯಮಾಲಾ ಗೆಲುವು ಸಾಧಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಒಟ್ಟು 813 ಮತಗಳು ಚಲಾವಣೆ ಆಗಿದ್ದು, ಅವುಗಳಲ್ಲಿ 512 ಮತಗಳನ್ನು ಜಯಮಾಲಾ ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ. ಆ ಮೂಲಕ ಮುಂದಿನ ಅವಧಿಗೆ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿದ್ದಾರೆ. ಅವರು ಎರಡನೇ ಬಾರಿ ಫಿಲಂ ಚೇಂಬರ್​​ನ ಅಧ್ಯಕ್ಷರಾಗಲಿದ್ದಾರೆ. 2008ರಲ್ಲಿ ಅವರು ಮಂಡಳಿಯ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಈಗ ಮತ್ತೊಮ್ಮೆ ಅಧ್ಯಕ್ಷರಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular