HomeLive NewsBREAKING: ನಟಿ ಜಯಮಾಲಾ, ಸಾ.ರಾ. ಗೋವಿಂದುಗೆ 'ಡಾ. ರಾಜಕುಮಾರ್ ಪ್ರಶಸ್ತಿ' ಘೋಷಣೆ

BREAKING: ನಟಿ ಜಯಮಾಲಾ, ಸಾ.ರಾ. ಗೋವಿಂದುಗೆ ‘ಡಾ. ರಾಜಕುಮಾರ್ ಪ್ರಶಸ್ತಿ’ ಘೋಷಣೆ

ಬೆಂಗಳೂರು: 2020- 21ನೇ ಸಾಲಿನ ಡಾ. ರಾಜಕುಮಾರ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಅದೇ ರೀತಿ ಪುಟ್ಟಣ್ಣ ಕಣಗಾಲ್, ವಿಷ್ಣುವರ್ಧನ್ ಪ್ರಶಸ್ತಿಯನ್ನು ಕೂಡ ಘೋಷಣೆ ಮಾಡಲಾಗಿದೆ.

ನಟಿ ಜಯಮಾಲಾ ಅವರಿಗೆ 2020ನೇ ಸಾಲಿನ ಡಾ. ರಾಜಕುಮಾರ್ ಪ್ರಶಸ್ತಿ ನೀಡಲಾಗಿದೆ. ಎಂಎಸ್ ಸತ್ಯು ಅವರಿಗೆ 2020ನೇ ಸಾಲಿನ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಗತಿ ಅಶ್ವತ್ಥ್ ನಾರಾಯಣ ಅವರಿಗೆ ಡಾ. ವಿಷ್ಣುವರ್ಧನ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಜೀವಮಾನ ಸಾಧನೆಗಾಗಿ ರಾಜ್ಯ ಸರ್ಕಾರ ಪ್ರಶಸ್ತಿ ಘೋಷಣೆ ಮಾಡಿದೆ.

ಸಾ.ರಾ. ಗೋವಿಂದು ಅವರಿಗೆ 2021ನೇ ಸಾಲಿನ ಡಾ. ರಾಜಕುಮಾರ್ ಪ್ರಶಸ್ತಿಯನ್ನು ನೀಡಲಾಗಿದೆ, ನಿರ್ದೇಶಕ ಶಿವರುದ್ರಯ್ಯ ಅವರಿಗೆ ಪುಟ್ಟಣ ಕಣಗಾಲ್ ಪ್ರಶಸ್ತಿ ಮತ್ತು ಹಿರಿಯ ನಟ ಎಂ.ಕೆ. ಸುಂದರರಾಜ್ ಅವರಿಗೆ ಡಾ. ವಿಷ್ಣು ವರ್ಧನ್ ಪ್ರಶಸ್ತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular