ಬೆಂಗಳೂರು : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು, ಕಿಡಿಗೇಡಿಗಳಿಗೆ ತನಿಖೆಯ ಬಿಸಿ ಮುಟ್ಟಿದೆ.
ಮೆಸೇಜ್ ಮಾಡಿದ 48 ಕಿಡಿಗೇಡಿಗಳ ಐಪಿ ಅಡ್ರೆಸ್ ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು 15 ಮಂದಿಯನ್ನು ಗುರುತಿಸಿದ್ದಾರೆ. 4 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಕಮೆಂಟ್ ಮಾಡಿದವರಿಗೆ ಪೊಲೀಸರು ಖಡಕ್ ವಾರ್ನಿಂಗ್ ನೀಡಿದ್ದಾರೆ. ನಾರ್ಮಲ್ ಆಗಿ ಕಮೆಂಟ್ ಮಾಡಿದ್ದವರು, ಅರಿವಿಲ್ಲದೇ ಮೆಸೇಜ್ ಮಾಡಿದ್ದವರು ಕ್ಷಮೆ ಕೇಳಿದ್ದಾರೆ.
ನಮ್ಮನ್ನು ಎಲ್ಲಿ ಬಂಧಿಸುತ್ತಾರೋ ಎಂದು ಅಶ್ಲೀಲ ಕಮೆಂಟ್ ಮಾಡಿದ ಕೆಲವರು ತಮ್ಮ ಐಪಿ ಅಡ್ರೆಸ್ ಬ್ಲಾಕ್ ಮಾಡಿ ಊರು ಬಿಟ್ಟಿದ್ದಾರೆ. ಈ ಮೂಲಕ ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಕಿಡಿಗೇಡಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಇನ್ಮುಂದೆ ಇಂತಹ ತಪ್ಪು ಮಾಡಲ್ಲ ಎಂದು ಕೆಲವರು ಕ್ಷಮೆ ಕೇಳಿದ್ದಾರೆ. ಒಟ್ಟಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಮನಸ್ಸಿಗೆ ಬಂದ ಹಾಗೆ ಅಶ್ಲೀಲ ಕಮೆಂಟ್ ಮಾಡುವ ನೆಟ್ಟಿಗರಿಗೆ ಇದೊಂದು ಪಾಠವಾಗಿದೆ.
ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಲ್ಲಿ ಓರ್ವ ನಟ ದರ್ಶನ್ ಅಭಿಮಾನಿ ಮತ್ತೋರ್ವ ನಟ ಧನ್ವೀರ್ ಅಭಿಮಾನಿ ಎಂದು ಹೇಳಲಾಗಿದೆ.