ಬೆಂಗಳೂರು : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ (CCB) ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದೆ.
ನಟಿ, ಸಂಸದೆ ರಮ್ಯಾ ಅವರುಗೆ ಅಶ್ಲೀಲ ಕಮೆಂಟ್ ವಿಚಾರವಾಗಿ ಮೊನ್ನೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದರು. ಈ ಬೆನ್ನಲ್ಲೇ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಿಸಿಬಿ ಪೊಲೀಸರು 13 ಜನರ ಮಾಹಿತಿ ಸಂಗ್ರಹಿಸಿದ್ದು, ಇದುವರೆಗೆ ನಾಲ್ವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರು ತಮ್ಮ ಜಾಲತಾಣಗಳ ಖಾತೆ ಮೂಲಕ ಕಮೆಂಟ್ ಕಳುಹಿಸುತ್ತಿದ್ದರು . ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಮಾಡುವವರ ಮೇಲೆ ನಿಗಾ ವಹಿಸಲಾಗುವುದು. ಅಸಭ್ಯ ಕಮೆಂಟ್ ಮಾಡಿದ್ರೆ ಕೇಸ್ ದಾಖಲಿಸಿ ಅರೆಸ್ಟ್ ಮಾಡುತ್ತೇವೆ ಎಂದು ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದರು.
You Might Also Like
TAGGED:ನಟಿ ರಮ್ಯಾ