BREAKING : ‘ಶ್ರೀದೇವಿ ಭೈರಪ್ಪ’ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟಿ ಸಪ್ತಮಿಗೌಡ..!

ಬೆಂಗಳೂರು : ರಾಘವೇಂದ್ರ ರಾಜ್ಕುಮಾರ್ ಅವರ 2ನೇ ಪುತ್ರ ಯುವ ರಾಜ್ಕುಮಾರ್ ಹಾಗೂ ಶ್ರೀದೇವಿ ಭೈರಪ್ಪ ನಡುವಿನ ವಿಚ್ಛೇದನ ವಿಚಾರವೀಗ ಭಾರಿ ಚರ್ಚೆಯಾಗುತ್ತಿದೆ.

ಇದೀಗ ಶ್ರೀದೇವಿ ಭೈರಪ್ಪ ವಿರುದ್ಧ ನಟಿ ಸಪ್ತಮಿಗೌಡ ಕೋರ್ಟ್ ಮೆಟ್ಟಿಲೇರಿದ್ದಾರೆ. ಯುವ ಪ್ರಕರಣದಲ್ಲಿ ತಮ್ಮ ಹೆಸರು ತಳುಕು ಹಾಕಲಾಗುತ್ತದೆ. ಇಲ್ಲ ಸಲ್ಲದ ಆರೋಪ ಮಾಡಿ ತಮ್ಮ ಚಾರಿತ್ರ್ಯವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಧಾವೆ ಹೂಡಿದ್ದಾರೆ. ಈ ಹಿನ್ನೆಲೆ ಮಾನಹಾನಿಕರ ಹೇಳಿಕೆ ನೀಡದಂತೆ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧಕಾಜ್ಞೆ ಆದೇಶ ಹೊರಡಿಸಿದೆ. ಹಾಗೂ ಶ್ರೀದೇವಿ ಭೈರಪ್ಪಗೂ ಕೋರ್ಟ್ ನೋಟಿಸ್ ನೀಡಿದೆ.

ದೊಡ್ಮನೆ ಹುಡುಗ ಸ್ಯಾಂಡಲ್ ವುಡ್ ಯುವ ನಟ ಯುವರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಯುವ ರಾಜ್ ಕುಮಾರ್, ಪತ್ನಿಗೆ ವಿಚ್ಛೇದನ ನೀಡುವಂತೆ ನೋಟಿಸ್ ನೀಡಿದ್ದಾರೆ.ಇದಕ್ಕೆ ನಟಿ ಸಪ್ತಮಿ ಗೌಡ ಕಾರಣ ಎಂಬ ಆರೋಪಗಳು ಕೇಳಿಬಂದಿದೆ.

ಯುವ ಸಿನಿಮಾದಲ್ಲಿ ಸಪ್ತಮಿ ಗೌಡ ಜೊತೆ ನಟಿಸಿದ್ದ ಯುವ ರಾಜ್    ಕುಮಾರ್  ಹಾಗೂ ಶ್ರೀದೇವಿ ಭೈರಪ್ಪ ನಡುವಿನ ವಿಚ್ಛೇದನಕ್ಕೆ ಸಪ್ತಮಿ ಗೌಡ ಅವರೇ ಕಾರಣ ಎನ್ನುವ ಮಾತಗಳು ಕೇಳಿ ಬಂದಿವೆ., ಯುವ ಹಾಗೂ ಸಪ್ತಮಿಗೆ ಅಫೇರ್ ಇದೆ ಎಂದು ಶ್ರೀದೇವಿ ಭೈರಪ್ಪ ಆರೋಪ ಮಾಡಿದ್ದರು. ಇಬ್ಬರನ್ನೂ ತಾವು ಹೋಟೆಲ್ ರೂಮ್ನಲ್ಲಿದ್ದಾಗಲೇ ನೋಡಿದ್ದೆ ಎಂದೂ ಶ್ರೀದೇವಿ ಭೈರಪ್ಪ ಹೇಳಿದ್ದಾರೆ. ಈ ಎಲ್ಲಾ    ವಿಚಾರಗಳ  ನಡುವೆ ಸಪ್ತಮಿ ಗೌಡ, ಶ್ರೀದೇವಿ ಭೈರಪ್ಪ ಮಾಡಿದ ಆರೋಪಗಳಿಗೆ ಕೋರ್ಟ್ ಮೆಟ್ಟಿಲೇರುವುದಾಗಿ ತಿಳಿಸಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read