ಬೆಂಗಳೂರು : ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಗೊಂಡಿದ್ದು, ಬರೋಬ್ಬರಿ 6.20 ಕೋಟಿ ಸಂಭಾವನೆ ನೀಡಲಾಗುತ್ತಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿ..ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ಕು. ತಮನ್ನಾ ಭಾಟಿಯ ಇವರನ್ನು 02 ವರ್ಷ ಮತ್ತು ಎರಡು ದಿನಗಳ ಅವಧಿಗೆ ರೂ.6.20 ಕೋಟಿ ವೆಚ್ಚದಲ್ಲಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.
ಉತ್ತಮ ಗುಣಮಟ್ಟದ ಸೇವೆಯನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ದೃಢಪಡಿಸಿಕೊಳ್ಳುವುದು ಎಂದು ಆದೇಶ ಹೊರಡಿಸಲಾಗಿದೆ.

TAGGED:ನಟಿ ತಮನ್ನಾ