ದಾವಣಗೆರೆ: ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ನಿಧನರಾದ ನಾಡಿನ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಸೋಮವಾರ ದಾವಣಗೆರೆ ನಗರಕ್ಕೆ ತರಲಾಗುವುದು.
ದಾವಣಗೆರೆಯ ಎಂಸಿಸಿ ಬಿ ಬ್ಲಾಕ್ ನಲ್ಲಿರುವ ಶಾಮನೂರು ಶಿವಶಂಕರಪ್ಪನವರ ನಿವಾಸ ‘ಶಿವ ಪಾರ್ವತಿ’ಯಲ್ಲಿ ಬೆಳಗ್ಗೆ 11 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 11 ಗಂಟೆಯ ನಂತರ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಸಂಜೆ 4 ಗಂಟೆಗೆ ಕಲ್ಲೇಶ್ವರ ಮಿಲ್ ಆವರಣದಲ್ಲಿ ಪತ್ನಿ ದಿವಂಗತ ಪಾರ್ವತಮ್ಮ ಶಿವಶಂಕರಪ್ಪನವರ ಸಮಾಧಿ ಸ್ಥಳದ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಲಿದೆ. ಗಣ್ಯರು ಸೇರಿದಂತೆ ಅಪಾರ ಸಂಖ್ಯೆ ಜನ ಅಂತಿಮ ದರ್ಶನ ಪಡೆದುಕೊಳ್ಳಲಿದ್ದಾರೆ.

