ನವದೆಹಲಿ : ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ಪರ್ಧಿಸುವುದು ಫಿಕ್ಸ್ ಆಗಿದ್ದು, ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
ಇಂದು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು, ರಾಜಸ್ಥಾನದಿಂದ ರಾಜ್ಯಸಭೆ ಚುನಾವಣೆಗೆ ಸೋನಿಯಾಗಾಂಧಿ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸಲು ಬುಧವಾರ ಬೆಳಿಗ್ಗೆ ಜೈಪುರಕ್ಕೆ ಆಗಮಿಸಿದರು.
ಮೂಲಗಳ ಪ್ರಕಾರ, ಜೈಪುರದಲ್ಲಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ಅವರ ಪುತ್ರ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಇರಲಿದ್ದಾರೆ.ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಈ ವರ್ಷದ ಏಪ್ರಿಲ್ ನಲ್ಲಿ ನಿವೃತ್ತರಾಗಲಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕೂಡ ರಾಜ್ಯಸಭಾ ಸದಸ್ಯರಾಗಿದ್ದರು.
https://twitter.com/INCIndia/status/1757649263822352547?ref_src=twsrc%5Etfw%7Ctwcamp%5Etweetembed%7Ctwterm%5E1757649263822352547%7Ctwgr%5Eef39353f818141824099510df10fa0d894fc68c0%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fsonia-gandhi-to-contest-rajya-sabha-elections-from-rajasthan-official-announcement%2F