HomeLatest NewsBREAKING: ತಡರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್

BREAKING: ತಡರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಉಸಿರಾಟ ತೊಂದರೆಯಿಂದಾಗಿ ಮಂಗಳವಾರ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬುಧವಾರ ಶಸ್ತ್ರಚಿಕಿತ್ಸೆ ಮೂಲಕ ಪೇಸ್ ಮೇಕರ್ ಅಳವಡಿಸಲಾಗಿದೆ. ಖರ್ಗೆಯವರ ಆರೋಗ್ಯ ಸ್ಥಿರವಾಗಿದ್ದು, ಗುರುವಾರ ತಡರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಅವರು ಶೀಘ್ರವೇ ಪಕ್ಷದ ಕೆಲಸ ಆರಂಭಿಸುವ ನಿರೀಕ್ಷೆ ಇದೆ. ದಿಢೀರ್ ಉಸಿರಾಟ ತೊಂದರೆಯಾಗಿದ್ದರಿಂದ ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ತಪಾಸಣೆ ನಡೆಸಿದಾಗ ಹೃದಯ ಬಡಿತದಲ್ಲಿ ಏರುಪೇರು ಆಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಶಾಶ್ವತ ಪೇಸ್ ಮೇಕರ್ ಅಳವಡಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಖರ್ಗೆಯವರ ಆರೋಗ್ಯ ವಿಚಾರಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ, ಸಚಿವ ಡಾ.ಜಿ. ಪರಮೇಶ್ವರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈದ್ಯರು ಎರಡು ಮೂರು ದಿನ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular