ದಶಕಗಳ ನಂತರ ಗೆಳೆಯ ದರ್ಶನ್ ಫೋಟೋ ಶೇರ್ ಮಾಡಿದ ನಟ ಕಿಚ್ಚ ಸುದೀಪ್ ಆಲ್ ದಿ ಬೆಸ್ಟ್ ಎಂದು ವಿಶ್ ಮಾಡಿದ್ದಾರೆ.
ಖ್ಯಾತ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಅಭಿಮಾನಿಗಳ ನಡುವಿನ ಫ್ಯಾನ್ಸ್ ವಾರ್ ತಾರಕ್ಕೇರಿದೆ. ಇದರ ನಡುವೆಯೇ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಯೊಬ್ಬರು ದರ್ಶನ್ ಬಗ್ಗೆ ಕೇಳಿದ ಪ್ರಶ್ನೆಗೆ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ಅವರಿಗೆ ಯಾವಾಗಲೂ ಶುಭ ಹಾರೈಸುತ್ತೇನೆ ಎಂದು ಉತ್ತರಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸುತ್ತಿದ್ದ ಕಿಚ್ಚ ಸುದೀಪ್ ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಮಾನಿಯೊಬ್ಬರು ದರ್ಶನ್ ಮತ್ತು ಸುದೀಪ್ ಜೊತೆಗಿರುವ ಫೋಟೋ ಹಂಚಿಕೊಂಡು ದರ್ಶನ್ ಬಗ್ಗೆ ಒಂದು ಮಾತು ಹೇಳಿ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಿಚ್ಚ ಸುದೀಪ್, ಯಾವಾಗಲೂ ಅವರಿಗೆ ಶುಭ ಹಾರೈಸುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ದರ್ಶನ್ ಜೊತೆಗೆ ತಾವು ಇರುವ ಫೋಟೋಗೆ ರಿಪ್ಲೈ ಮಾಡಿದ್ದರಿಂದ ಜಾಲತಾಣದಲ್ಲಿ ಅದು ಪುನಃ ಶೇರ್ ಆಗಿದೆ. ಈ ಮೂಲಕ ಫ್ಯಾನ್ಸ್ ವಾರ್ ಗೆ ವಿರಾಮ ಹಾಕುವ ಪ್ರಯತ್ನವನ್ನು ಸುದೀಪ್ ಮಾಡಿದ್ದಾರೆ.

