ಬೆಳಗಾವಿ : ನೇಣು ಬಿಗಿದುಕೊಂಡು ಬಿಸಿಎ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅನ್ಯಕೋಮಿನ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.
ಈಕೆ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ನವೀನ್ ಫರ್ನೀಚರ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದನುನವೀನ್ ಕೆಲಸ ಮಾಡುತ್ತಿದ್ದ ಫರ್ನೀಚರ್ ಅಂಗಡಿಯ ಮಾಲೀಕ (ಅನ್ಯಕೋಮಿನ ಯುವಕ) ನ ಶಿಲ್ಪಾಗೆ ಕರೆ ಮಾಡಿ ಕಿರುಕುಳ ನೀಡಿದ್ದನು ಎನ್ನಲಾಗಿದೆ. ಇದರಿಂದ ಮನನೊಂದ ಶಿಲ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

