BREAKING : ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪ ; ಸೂರಜ್ ರೇವಣ್ಣ ವಿರುದ್ಧ ‘FIR’ ದಾಖಲು |Sooraj Revanna

ಹಾಸನ : ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 , 342 ಹಾಗೂ 506 ರಡಿ ಕೇಸ್ ದಾಖಲು ಮಾಡಲಾಗಿದೆ.

ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಶುಕ್ರವಾರ ಡಿಜಿ ಕಛೇರಿಯಲ್ಲಿ ಸಂತ್ರಸ್ತ ದೂರು ನೀಡಿದ್ದರು. ಅಲ್ಲದೇ ಹಾಸನ ಎಸ್ಪಿಗೂ ದೂರಿನ ಪ್ರತಿ ಮೇಲ್ ಮಾಡಿದ್ದ. ಈ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸೂರಜ್ ರೇವಣ್ಣ ಪ್ರತಿಕ್ರಿಯೆ ನೀಡಿದ್ದು, . ನನ್ನ ವಿರುದ್ಧ ಸಂಪೂರ್ಣ ರಾಜಕೀಯ ಷಡ್ಯಂತ್ರ ನಡೆದಿದೆ. ತನಿಖೆ ಬಳಿಕ ಎಲ್ಲ ಗೊತ್ತಾಗಲಿದೆ. ನನ್ನ ವಿರುದ್ಧ ಮಾಡಿರುವ ಆರೋಪವನ್ನು ತಿರಸ್ಕರಿಸುತ್ತೇನೆ. ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read