BREAKING : ದಿನಗೂಲಿ ಕಾರ್ಮಿಕರ ವಿರುದ್ಧ ದೌರ್ಜನ್ಯ ಆರೋಪ : ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘FIR’ ದಾಖಲು.!

ಬೆಂಗಳೂರು : ದಿನಗೂಲಿ ಕೆಲಸಗಾರರ ವಿರುದ್ಧ ದೌರ್ಜನ್ಯ ಆರೋಪದ ಹಿನ್ನೆಲೆ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.

ಮನೆ ನೆಲಸಮ ಮಾಡಿ ಶಾಸಕ ಮುನಿರತ್ನ ಮತ್ತು ಸಹಚರರು ದರ್ಪ ಮೆರೆದಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಮುನಿರತ್ನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು 50 ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.ವಸಂತ್ ಕುಮಾರ್, ಚನ್ನಕೇಶವ, ನವೀನ್, ರಾಮ , ಕಿಟ್ಟಿ , ಗಂಗಾ ಎಂಬುವವರು ಬಂದು ಮನೆ ನೆಲಸಮ ಮಾಡಿಸಿದ್ದಾರೆ. ಮನೆಯಲ್ಲಿ ಕೂಡಿಟಿದ್ದ 20-70 ಸಾವಿರ ಹಣ 30 ಗ್ರಾಂ ಚಿನ್ನಾಭರಣ ಮಣ್ಣು ಪಾಲಾಗಿದೆಯೆಂದು ದೂರಿನಲ್ಲಿ ಉಲ್ಲೇಖಿಸಲಾಗಿ ದೆ.ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read