ಬೆಂಗಳೂರು : ಆ.16 ರಂದು ನಾಳೆ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿರುತ್ತದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ದಿನಾಂಕ: 16-08-2025ರ ಶನಿವಾರ “ಶ್ರೀ ಕೃಷ್ಣಾ ಜನ್ಮಾಷ್ಟಮಿ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.
