ಬೆಂಗಳೂರು: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್ ಗೆ ಬೆಂಕಿ ತಗುಲಿದ ಘಟನೆ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ನಡೆದಿದೆ.
ಸಂಜನಾ ಟ್ರಾವೆಲ್ಸ್ ಗೆ ಸೇರಿದ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿ ಘಟನೆ ನಡೆದಿದೆ.
ತುಮಕೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹನುಮಂತಪುರ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ತಗುಲಿದ ಬೆಂಕಿಯಿಂದ ಖಾಸಗಿ ಬಸ್ ಸುಟ್ಟು ಸಂಪೂರ್ಣ ನಾಶವಾಗಿದೆ.
ನೆಲಮಂಗಲ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶಾತ್ ಬಸ್ ನಲ್ಲಿದ್ದ 40 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

