ಬೆಳ್ತಂಗಡಿ: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಸ್ಐಟಿ ಪೊಲೀಸ್ ಅಧೀಕ್ಷಕ ಸೈಮನ್ ಅವರ ದೂರು ಆಧರಿಸಿ ಮಹೇಶ ಶೆಟ್ಟಿ ದಾಖಲಿಸಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆಯ 25(1), 25(1ಎ), 24(1) ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆಗಸ್ಟ್ 26ರಂದು ತಿಮರೋಡಿ ಅವರ ಮನೆಯಲ್ಲಿ ಎಸ್ಐಟಿಯಿಂದ ಶೋಧ ನಡೆಸಲಾಗಿತ್ತು. ಬಂದೂಕು ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.