HomeKarnatakaBREAKING : ಹುಲಿ ಉಗುರು : ನಟ `ದರ್ಶನ್' ವಿರುದ್ಧ ಮತ್ತೊಂದು ದೂರು ದಾಖಲು

BREAKING : ಹುಲಿ ಉಗುರು : ನಟ `ದರ್ಶನ್’ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಜನತಾ ಪಕ್ಷದ ನಾಗೇಶ್ ಎಂಬುವರು ದೂರು ನೀಡಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿ ವನ್ಯ ಜೀವಿ ಸಂರಕ್ಷಣಾ ಅಧಿಕಾರಿಗಳಿಗೆ ನಾಗೇಶ್ ಫೋಟೋ  ದಾಖಲೆ ಸಮೇತ ದೂರು ಕೊಟ್ಟಿದ್ದು, ನಟ ದರ್ಶನ್ ಕೊರಳಿನಲ್ಲಿ ಹುಲಿ ಉಗುರು ಧರಿಸಿದ್ದಾರೆ ಎಂದು ಫೋಟೋ ಸಮೇತ ದಾಖಲೆಗಳನ್ನೂ ನೀಡಿದ್ದಾರೆ.  ಈಗಾಲಾದ್ರೂ ನಟ ದರ್ಶನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟ ದರ್ಶನ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಗೇಶ್ ಅವರು ಬೆಂಗಳೂರಿನ ಅರಣ್ಯ ಭವನದಲ್ಲಿ ಪ್ರತಿಭಟನೆಯನ್ನೂ ಸಹ ಮಾಡಿದ್ದಾರೆ.

ವರ್ತೂರು ಸಂತೋಷ್ ವಿರುದ್ಧ ಹುಲಿ ಉಗುರು ಧರಿಸಿರುವ ಆರೋಪದ ಹಿನ್ನೆಲೆಯಲ್ಲಿ ಅವರ ವರ್ತೂರು ಸಂತೋಷ್ ವಿರುದ್ಧ ಅರಣ್ಯ ಅಧಿಕಾರಿಗಳು ಎಫ್​ಐಆರ್ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಅರಣ್ಯ ಅಧಿಕಾರಿಗಳು ಅವರನ್ನು ಬಿಗ್‌ ಬಾಸ್‌ ಮನೆಯಿಂದಲೇ ಬಂಧಿಸಿ ನ್ಯಾಯಾಲಯದ ಆದೇಶದಂತೆ ವರ್ತೂರು ಸಂತೋಷ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular