HomeLatest NewsBREAKING: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪದಡಿ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು ದಾಖಲು

BREAKING: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪದಡಿ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು ದಾಖಲು

ಚಾಮರಾಜನಗರ: ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಾಮಾಜಿಕ ಜಾಲತಾಣದ ಮೂಲಕ ಸಮಾಜದ ಸ್ವಾಸ್ಥ್ಯ ಕಳೆಯುವುದು, ಅಪಪ್ರಚಾರ ನಡೆಸುತ್ತಿರುವ ಆರೋಪದಡಿ ವೃಷಭೇಂದ್ರ ಅವರು ಹನೂರು ಠಾಣೆಗೆ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ಸಮೀರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ. ನಿರೀಕ್ಷಣಾ ಜಾಮೀನಿನ ಮೇಲೆ ಹೊರಗಿದ್ದಾರೆ. ಹೀಗಿರುವಾಗಲೇ ಅವರಿಗೆ ವಿರುದ್ಧ ವಿವಿಧೆಡೆ ದೂರು ದಾಖಲಾಗಿವೆ. ಚಿಕ್ಕಮಗಳೂರು ಜಿಲ್ಲೆ ಕಡೂರು ಪೊಲೀಸ್ ಠಾಣೆಯಲ್ಲಿ ಮಂಜು ಜೈನ್ ದೂರು ದಾಖಲಿಸಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಭಾವನೆಗೆ ಧಕ್ಕೆ ತಂದಿದ್ದು, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ. ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಸಮೀರ್ ಗೆ ನಿರೀಕ್ಷಣಾ ಜಾಮೀನು ನೀಡಿದೆ. ಈ ನಡುವೆ ನಾಳೆ ವಿಚಾರಣೆಗೆ ಬರುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular