HomeKarnatakaBREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಪೇಪರ್‌ ಬಾಕ್ಸ್‌ ತಯಾರಿಕಾ ಕಾರ್ಖಾನೆಯಲ್ಲಿ ಬಾಕ್ಸ್‌ ಹಾಗೂ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಬೆಂಗಳೂರಿನ ಗಂಗಮ್ಮನ ಗುಡಿ ವ್ಯಾಪ್ತಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಪೇಪರ್‌ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು,  ಘಟನೆಯಲ್ಲಿ ಫ್ಯಾಕ್ಟರಿಯಲ್ಲಿದ್ದ ಬಾಕ್ಸ್ ಹಾಗೂ ವಸ್ತುಗಳು ಸುಟ್ಟು ಕರಕಲಾಗಿವೆ.

ಅಗ್ನಿ ಅವಘಡದ ಕುರಿತು ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ವರದಿಯಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular