HomeLatest NewsBREAKING: ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ: ಎರಡು ವರ್ಷದ ಮಗನ ಎದುರಲ್ಲೇ ದಂಪತಿ ಬರ್ಬರ ಹತ್ಯೆ

BREAKING: ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ: ಎರಡು ವರ್ಷದ ಮಗನ ಎದುರಲ್ಲೇ ದಂಪತಿ ಬರ್ಬರ ಹತ್ಯೆ

ಬೀದರ್: ಎರಡು ವರ್ಷದ ಮಗನ ಎದುರಲ್ಲೇ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೊಹಿನೂರ್ ಪಾಹಾಡ್ ಗ್ರಾಮದ ಬಳಿ ನಡೆದಿದೆ.

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಕೊಹಿನೂರ ಪಹಾಡ್ ಗ್ರಾಮದ ಬಳಿ ಕತ್ತು ಕೊಯ್ದು ರಾಜು ಕೊಳಸುರೆ(28) ಶಾರದಾ(27) ಅವರನ್ನು ಕೊಲೆ ಮಾಡಲಾಗಿದೆ. ಮೃತಪಟ್ಟ ದಂಪತಿ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜಾಫರ್ ವಾಡಿ ಗ್ರಾಮದ ನಿವಾಸಿಗಳಾಗಿದ್ದಾರೆ.

ಜಾಫರವಾಡಿಯ ದತ್ತಾತ್ರೇಯ ಮತ್ತು ತುಕಾರಾಮ ಅವರು ದಂಪತಿ ಕೊಲೆಗೈದ ನಂತರ ಪೊಲೀಸರಿಗೆ ಶರಣಾಗಿದ್ದಾರೆ. ದತ್ತಾತ್ರೇಯ ತಂಗಿಯ ಜೊತೆಗೆ ರಾಜು ಅನೈತಿಕ ಸಂಬಂಧ ಹೊಂದಿದ್ದು, ಇಬ್ಬರು ಜೊತೆಗಿರುವ ಫೋಟೋವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದ. ಇದರಿಂದ ಕೋಪಗೊಂಡು ರಾಜು ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾತನಾಡುವ ನೆಪದಲ್ಲಿ ತಂಗಿಯಿಂದಲೇ ಕರೆ ಮಾಡಿಸಿ ಮುಂಬೈನಿಂದ ಜಾಫರವಾಡಿಗೆ ರಾಜನನ್ನು ಕರೆಸಿಕೊಂಡು ಹತ್ಯೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವಕಲ್ಯಾಣದ ಮಂಠಾಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular