ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 10 ವರ್ಷದ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
40 ವರ್ಷ ಮತ್ತು 24 ವರ್ಷದ ಆರೋಪಿಗಳಿಬ್ಬರು ಒಂದು ವರ್ಷದಿಂದ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಗುರುವಾರ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.
ಅತ್ಯಾಚಾರದ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಮತ್ತು ನಿನ್ನ ತಾಯಿಯನ್ನು ಸಾಯಿಸುವುದಾಗಿ ಆರೋಪಿಗಳು ಬೆದರಿಸಿದ್ದಾರೆ. ತನ್ನನ್ನು ದೈಹಿಕವಾಗಿ ಬಳಸಿಕೊಂಡ ಬಗ್ಗೆ ಶಾಲೆಯ ಶಿಕ್ಷಕಿಗೆ ಬಾಲಕಿ ವಿಷಯ ತಿಳಿಸಿದ್ದಾಳೆ. ಶಿಕ್ಷಕಿ ಪೋಷಕರಿಗೆ ಮಾಹಿತಿ ನೀಡಿದ್ದರಿಂದ ವಿಷಯ ಗೊತ್ತಾಗಿದೆ. ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಆನಂದ್ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
