HomeLatest News BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಬಾಲಕಿ ಬೆದರಿಸಿ ಅತ್ಯಾಚಾರ: ಇಬ್ಬರು ಅರೆಸ್ಟ್

 BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಬಾಲಕಿ ಬೆದರಿಸಿ ಅತ್ಯಾಚಾರ: ಇಬ್ಬರು ಅರೆಸ್ಟ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 10 ವರ್ಷದ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

40 ವರ್ಷ ಮತ್ತು 24 ವರ್ಷದ ಆರೋಪಿಗಳಿಬ್ಬರು ಒಂದು ವರ್ಷದಿಂದ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಗುರುವಾರ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.

ಅತ್ಯಾಚಾರದ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಮತ್ತು ನಿನ್ನ ತಾಯಿಯನ್ನು ಸಾಯಿಸುವುದಾಗಿ ಆರೋಪಿಗಳು ಬೆದರಿಸಿದ್ದಾರೆ. ತನ್ನನ್ನು ದೈಹಿಕವಾಗಿ ಬಳಸಿಕೊಂಡ ಬಗ್ಗೆ ಶಾಲೆಯ ಶಿಕ್ಷಕಿಗೆ ಬಾಲಕಿ ವಿಷಯ ತಿಳಿಸಿದ್ದಾಳೆ. ಶಿಕ್ಷಕಿ ಪೋಷಕರಿಗೆ ಮಾಹಿತಿ ನೀಡಿದ್ದರಿಂದ ವಿಷಯ ಗೊತ್ತಾಗಿದೆ. ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಆನಂದ್ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular