ಹಾವೇರಿ: ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಕ್ಕಳ ಜೊತೆಗೆ ವಾಸವಾಗಿದ್ದ ಲಲಿತಾ ಕರಬಸಪ್ಪ ಬ್ಯಾಡಗಿ(45) ಕೊಲೆಯಾದವರು ಎಂದು ಹೇಳಲಾಗಿದೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ರಸ್ತೆಯ ಮನೆಯಲ್ಲಿ ಲಲಿತಾ ಅವರನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದ ನಿವಾಸಿ ಲಲಿತಾ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಾಣೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
