HomeLatest NewsBREAKING : ಬೆಂಗಳೂರಲ್ಲಿ ಆಟೋಗೆ 'KSRTC' ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು, ಮೂವರ ಸ್ಥಿತಿ...

BREAKING : ಬೆಂಗಳೂರಲ್ಲಿ ಆಟೋಗೆ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ.!

ಬೆಂಗಳೂರು : ಬೆಂಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಆಟೋಗೆ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿಯಲ್ಲಿ ಈ ಘಟನೆ ನಡೆದಿದೆ. ಯಂಟಾಗನಹಳ್ಳಿ ಗ್ರಾಮ ಪಂಚಾಯಿತಿಯ ವಾಟರ್ ಮ್ಯಾನ್ ಶ್ರೀನಿವಾಸ್ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರು  ಶಾಂತಿನಗರ ಗ್ರಾಮದ ನಿವಾಸಿಗಳು . ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು,ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular