ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ ಗೆ ಕಾರ್ ಡಿಕ್ಕಿಯಾಗಿ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನೆಲಮಂಗಲದ ಜಿಂದಾಲ್ ಸಮೀಪ ಭೀಕರ ಅಪಘಾತ ಸಂಭವಿಸಿದೆ.
ಇಂಡಿಕಾ ಕಾರ್ ನಲ್ಲಿದ್ದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇಂಡಿಕಾ ಕಾರ್ ನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ತುಮಕೂರು ಕಡೆಯಿಂದ ಕಾರ್ ನಲ್ಲಿ ಐವರು ಬರುತ್ತಿದ್ದರು. ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ ನಿಂದ ಜಂಪ್ ಮಾಡಿ ಎದುರಿಗೆ ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ.
ಬೆಂಗಳೂರು ಕಡೆಯಿಂದ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಗೆ ಕಾರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹಗಳನ್ನು ರವಾನೆ ಮಾಡಲಾಗಿದೆ ಸಾವಿಗೀಡಾದವರಲ್ಲಿ ಮೂವರ ಗುರುತು ಇನ್ನು ಪತ್ತೆಯಾಗಿಲ್ಲ. ಹರ್ಷಿತ್ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿ ಎನ್ನಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

