ಕಾರವಾರ: ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಲ್ಲಾಪುರ ಮಾವಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಬಸ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗಲಕೋಟೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಯಲ್ಲಾಪುರ -ಅಂಕೋಲಾ ರಸ್ತೆಯ ದಟ್ಟ ಕಾಡಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕೇರಳ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತರು ಬಾಗಲಕೋಟೆ ಮೂಲದವರು ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.