HomeLatest NewsBREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಟಿಪ್ಪರ್ ಹರಿದು ಇಬ್ಬರು ಸ್ಥಳದಲ್ಲೇ ಸಾವು

BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಟಿಪ್ಪರ್ ಹರಿದು ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಮತ್ತು ಪುರುಷ ಸಾವನ್ನಪ್ಪಿದ್ದಾರೆ. ಬನ್ನೇರುಘಟ್ಟ ಮುಖ್ಯ ರಸ್ತೆಯ ಹಾರಗದ್ದೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಸೀತನಾಯಕನಹಳ್ಳಿಯಿಂದ ಜಿಗಣಿಯತ್ತ ಬೈಕ್ ಸವಾರರು ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ನಿಂದ ಕೆಳಗೆ ಬಿದ್ದವರ ಮೇಲೆ ಟಿಪ್ಪರ್ ಹರಿದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಮತ್ತು ಪುರುಷ ಕೆಳಗೆ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಜಿಗಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular