HomeKarnatakaBREAKING : ಬೆಂಗಳೂರಲ್ಲಿ ಮತ್ತೊಂದು ಘೋರ ಘಟನೆ : ಕಾಲೇಜು ಕಟ್ಟಡದಿಂದ ಜಿಗಿದು 'BBA' ವಿದ್ಯಾರ್ಥಿ...

BREAKING : ಬೆಂಗಳೂರಲ್ಲಿ ಮತ್ತೊಂದು ಘೋರ ಘಟನೆ : ಕಾಲೇಜು ಕಟ್ಟಡದಿಂದ ಜಿಗಿದು ‘BBA’ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು  : ಬೆಂಗಳೂರಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, 6ನೇ ಮಹಡಿಯಿಂದ ಜಿಗಿದು ಬಿಬಿಎ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ವಿಘ್ನೇಶ್ ಕೆ(19) ಎಂದು ಗುರುತಿಸಲಾಗಿದೆ.ಬೆಂಗಳೂರಿನ ಹೊಸರೋಡ್ ಬಳಿಯಿರುವ ಪಿಇಎಸ್ ಕಾಲೇಜಿನ 6 ನೇ ಮಹಡಿಯಿಂದ ಜಿಗಿದುಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.  ಪ್ರಥಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಜಿಗಿದಿದ್ದಾನೆ, ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular