ಹಾಸನ: ಗಣೇಶ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು ನಾಲ್ವರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಬಳಿ ನಡೆದಿದೆ. ಸಾವು ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಹಾಸನದಲ್ಲಿ ಭೀಕರ ದುರಂತ ಸಂಭವಿಸಿದೆ. ಮೊಸಳೆಹೊಸಹಳ್ಳಿ ಬಳಿ ಗಣೇಶ ಮೆರವಣಿಗೆ ಸಾಗುವಾಗ ಕ್ಯಾಂಟರ್ ಏಕಾಏಕಿ ನುಗ್ಗಿದೆ. ನಾಲ್ವರು ಸಾವನ್ನಪ್ಪಿದ್ದಾರೆ. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.