BREAKING : ಬೆಂಗಳೂರಿನ ಮತ್ತೊಂದು ಹೋಟೆಲ್’ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ಬೆಂಗಳೂರು : ಬೆಂಗಳೂರಿನ ಮತ್ತೊಂದು ಹೋಟೆಲ್ ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಒಟೆರಾ ಹೋಟೆಲ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದಕ್ಕೂ ಮುನ್ನ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಹೋಟೆಲ್ ನ ಇಮೇಲ್ ಐಡಿಗೆ ಕಿಡಿಗೇಡಿಗಳು ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಿ ಸಂದೇಶ ಕಳುಹಿಸಿದ್ದರು. ಬೆಂಗಳೂರಿನ ಪ್ರತಿಷ್ಟಿತ ತಾಜ್ ವೆಸ್ಟೆಂಡ್’ ಹೋಟೆಲ್ ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ನಂತರ ಇದೊಂದು ಹುಸಿ ಸಂದೇಶ ಎಂಬುದು ಸ್ಪಷ್ಟವಾಯಿತು. ಈ ಬೆನ್ನಲ್ಲೇ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಒಟೆರಾ ಹೋಟೆಲ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read