HomeKarnatakaBREAKING : ಬೆಂಗಳೂರಿನಲ್ಲಿ ಮತ್ತೊಂದು 'ಚಿರತೆ' ಪ್ರತ್ಯಕ್ಷ, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ.!

BREAKING : ಬೆಂಗಳೂರಿನಲ್ಲಿ ಮತ್ತೊಂದು ‘ಚಿರತೆ’ ಪ್ರತ್ಯಕ್ಷ, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕೆರೆಪಾಳ್ಯದ ಬೆಟ್ಟದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ.
ನೆಲಮಂಗಲದಲ್ಲಿ ಇತ್ತೀಚೆಗಷ್ಟೇ 3 ಚಿರತೆಗಳನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದರು. ಈ ಹಿಂದೆ ಕಂಬಾಳು, ಗೊಲ್ಲರಹಟ್ಟಿಯಲ್ಲಿ 3 ಚಿರತೆ ಕಾಣಿಸಿಕೊಂಡಿದ್ದವು.

ಚಿರತೆ ದಾಳಿಗೆ ಮಹಿಳೆ ಬಲಿಯಾದ ಘಟನೆ ನೆಲಮಂಗಲ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿತ್ತು. ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ಹೋಗಿದ್ದ ವೇಳೆ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿತ್ತು. ಕರಿಯಮ್ಮ (55) ಚಿರತೆ ದಾಳಿಗೆ ಬಲಿಯಾದ ಮಹಿಳೆ.ರುಂಡವನ್ನು ಚಿರತೆ ತಿಂದಿದ್ದರಿಂದ ಮುಂಡ ಮಾತ್ರ ಪತ್ತೆ ಆಗಿತ್ತು. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಬಳಿಕ ಅರಣ್ಯಾಧಿಕಾರಿಗಳು ನರಭಕ್ಷಕ ಚಿರತೆಯನ್ನು ಸೆರೆ ಹಿಡಿದಿದ್ದರು. ಒಟ್ಟಿನಲ್ಲಿ ಕಳೆದ ಕೆಲವು ದಿನಗಳಲ್ಲಿ 3 ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular