ಬೆಂಗಳೂರು: ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ನಗರ್ತಪೇಟೆಯಲ್ಲಿರುವ ಪ್ಲಾಸ್ಟಿಕ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಕಾರ್ಮಿಕ ಸಜೀವದಹನವಾಗಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡು ಶಂಕೆ ವ್ಯಕ್ತವಾಗಿದೆ. ಮುಂಜಾನೆ 3.30ರ ಸುಮಾರಿಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಓರ್ವ ಸಜೀವದಹನವಾಗಿದ್ದು, ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಅಪಾರ ವಸ್ತುಗಳು ಸುಟ್ಟು ಹೋಗಿದ್ದು, ಭಾರಿ ನಷ್ಟವಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.