HomeLatest NewsBREAKING: ಬೆಂಗಳೂರಲ್ಲಿ ಮತ್ತೊಂದು ಭಾರಿ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಓರ್ವ...

BREAKING: ಬೆಂಗಳೂರಲ್ಲಿ ಮತ್ತೊಂದು ಭಾರಿ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಓರ್ವ ಸಜೀವದಹನ

ಬೆಂಗಳೂರು: ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ನಗರ್ತಪೇಟೆಯಲ್ಲಿರುವ ಪ್ಲಾಸ್ಟಿಕ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಕಾರ್ಮಿಕ ಸಜೀವದಹನವಾಗಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡು ಶಂಕೆ ವ್ಯಕ್ತವಾಗಿದೆ. ಮುಂಜಾನೆ 3.30ರ ಸುಮಾರಿಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಓರ್ವ ಸಜೀವದಹನವಾಗಿದ್ದು, ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಅಪಾರ ವಸ್ತುಗಳು ಸುಟ್ಟು ಹೋಗಿದ್ದು, ಭಾರಿ ನಷ್ಟವಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular