BREAKING : ಬೆಂಗಳೂರು ನಗರದಲ್ಲಿ ಮತ್ತೊಂದು ಭಾರಿ ಅಗ್ನಿ ಅವಘಡ

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಬಟ್ಟೆ, ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಮಾರತ್‌ ಹಳ್ಳಿಯ ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ಅಕ್ಕಪಕ್ಕದ ಮೂರ್ನಾಲ್ಕು ಕಟ್ಟಡಗಳಿಗೆ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟವಾಗಿದೆ. ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ವೇಳೆ ನಾಲ್ವರು ಕಟ್ಟಡದಲ್ಲಿದ್ದರು.ಕೂಡಲೇ ಅಗ್ನಿ ಶಾಮಕ ಸಿಬ್ಬಂದಿ ನಾಲ್ವರನ್ನು ರಕ್ಷಣೆ ಮಾಡಿದೆ. ಮೊದಲು ಲೂಯಿಸ್‌ ಫಿಪ್‌ ಬಟ್ಟೆ ಶೂರಂಗೆ ಬೆಂಕಿ ಹೊತ್ತಿಕೊಂಡಿದ್ದು, ನಂತರ ಪಕ್ಕದ ಅಂಗಡಿ, ಟ್ರಾನ್ಸ್‌ ಫಾರ್ಮರ್‌ ಗೆ ಬೆಂಕಿ ವ್ಯಾಪಿಸಿದೆ.

ಅಗ್ನಿ ಅವಘಡದಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಓರ್ವನನ್ನು ಸುರಕ್ಷಿತವಾಗಿ ಹೊರತಂದು ರಕ್ಷಿಸಿದ್ದಾರೆ. ಎರಡೂವರೆ ಗಂಟೆ ಕಾರ್ಯಾಚರಣೆ ಬಳಿಕ ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮಾರತ್‌ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ  ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read