ಬೆಂಗಳೂರು: ಬೆಂಗಳೂರಿನಲ್ಲಿ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ವೀರಣ್ಣನಪಾಳ್ಯದ ಲೇಬರ್ ಶೆಡ್ ನಲ್ಲಿ ನಡೆದಿದೆ.
ಜಾರ್ಖಂಡ್ ಮೂಲದ ರಾಜು ಕೊಲೆಯಾದ ಯುವಕ. ಆರೋಪಿ ರಾಘು ಎಂಬಾತ ಕೊಲೆ ಮಾಡಿ ಪರಾರಿಯಾಗುವಾಗ ಬಂಧಿಸಲಾಗಿದೆ. ಒಂದೇ ಶೆಡ್ ನಲ್ಲಿ ನಾಲ್ವರು ವಾಸವಾಗಿದ್ದರು. ಸ್ನೇಹಿತರ ನಡುವೆ ಗಲಾಟೆ ವೇಳೆ ರಾಜುನನ್ನು ಕೊಲೆ ಮಾಡಲಾಗಿದೆ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆರೋಪಿ ರಾಘು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ಸ್ನೇಹಿತ ರಾಜು ಕತ್ತು ಕೊಯ್ದು ರಾಘು ಕೊಲೆ ಮಾಡಿದ್ದಾನೆ. ಒಂದೇ ಶೆಡ್ ನಲ್ಲಿ ನಾಲ್ವರು ಸ್ನೇಹಿತರು ವಾಸವಾಗಿದ್ದರು. 2 ದಿನದ ಹಿಂದೆ ಗಲಾಟೆಯಾಗಿದ್ದು, ನಿರಂತರವಾಗಿ ಮುಂದುವರೆದಿತ್ತು. ಅ. 6ರಂದು ಉಳಿದ ಇಬ್ಬರು ಸ್ನೇಹಿತರು ಕೆಲಸಕ್ಕೆ ಹೋಗಿದ್ದರು. ಮನೆಯಲ್ಲಿ ರಾಜು ಮತ್ತು ರಾಘು ಉಳಿದುಕೊಂಡಿದ್ದು, ಇಬ್ಬರ ಮಧ್ಯೆ ಗಲಾಟೆಯಾಗಿದೆ. ಈ ವೇಳೆ ರಾಜು ಕತ್ತು ಕೊಯ್ದು ರಾಘು ಕೊಲೆ ಮಾಡಿದ್ದಾನೆ. ಸ್ನೇಹಿತರು ರಾತ್ರಿ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಬೈಯಪ್ಪನಹಳ್ಳಿ ರೈಲು ನಿಲ್ದಾಣಕ್ಕೆ ತೆರಳಿದ್ದ ಪರಾರಿಯಾಗಲು ಯತ್ನಿಸಿದ್ದ ಆರೋಪಿ ರಾಘುನನ್ನು ರೈಲು ನಿಲ್ದಾಣದಲ್ಲಿ ಬಂಧಿಸಿ ಪೊಲೀಸರು ಕರೆತಂದಿದ್ದಾರೆ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.