ಹಾವೇರಿ : ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಮತ್ತೋರ್ವ ಸಾವನಪ್ಪಿದ್ದು, ಕಳೆದ 3 ದಿನದಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಯಳವಟ್ಟಿ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋಗಿದ್ದ ವ್ಯಕ್ತಿ ಹೋರಿ ತಿವಿದು ಗಂಭೀರವಾಗಿ ಗಾಯಗೊಂಡಿದ್ದನು. ಆ ವ್ಯಕ್ತಿ ಇದೀಗ ಮೃತಪಟ್ಟಿದ್ದು, ಸಾವಿನ ಸಂಖ್ಯೆ 4 ಕ್ಕೇರಿಕೆಯಾಗಿದೆ. ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
