HomeKarnatakaBREAKING: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿ

BREAKING: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯನ್ನು ಕಾಡಾನೆ ಬಲಿ ಪಡೆದುಕೊಂಡಿದೆ.

ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಹೊಸಪೇಟೆ ಮೂಲದ ಬೋರಮ್ಮ(34) ಮೃತಪಟ್ಟವರು ಎಂದು ಹೇಳಲಾಗಿದೆ. ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ಲೈನ್ ಮನೆಯ ಬಳಿ ಕಾಡಾನೆ ದಾಳಿ ಮಾಡಿದ್ದು, ಚಿಕ್ಕಮಗಳೂರಿನಲ್ಲಿ 7 ದಿನಗಳ ಅಂತರದಲ್ಲಿ ಎರಡನೇ ಬಲಿಯಾಗಿದೆ.

ಕಾಡಾನೆ ಸೆರೆಗೆ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಮತ್ತೊಂದು ಕಡೆ ಕಾರ್ಮಿಕ ಮಹಿಳೆಯನ್ನು ಆನೆ ಬಲಿ ಪಡೆದಿದೆ. ಕಾಡಾನೆ ಸೆರೆಗೆ 7 ಕುಮ್ಕಿ ಆನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಕಾರ್ಯಾಚರಣೆ ವೇಳೆ ದಾಳಿ ಮಾಡಿ ಕಾಡಾನೆ ಮಹಿಳೆಯನ್ನು ಬಲಿ ಪಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಮಿಕರಿಗೆ ಸೂಚನೆ ನೀಡಿದ್ದಾರೆ. ಮಹಿಳೆ ಮೃತದೇಹ ಸಾಗಿಸುತ್ತಿದ್ದ ವಾಹನ ತಡೆದು ಸ್ಥಳೀಯರು ಆತ್ರೋಷ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಗ್ರಾಮದಲ್ಲಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular