ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ದಾಸನಪುರದಲ್ಲಿ ಜುವೆಲ್ಲರಿ ಶಾಪ್ ಗೆ ನುಗ್ಗಿ ದರೋಡೆ ಮಾಡಲಾಗಿದೆ.
ಗನ್ ತೋರಿಸಿದ ಖದೀಮರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯ ದಾಸನಪುರದಲ್ಲಿ ರಾಮದೇವ್ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಚಿನ್ನಾಭರಣ ದರೋಡೆ ಮಾಡಲಾಗಿದೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ದರೋಡೆಕೋರರು ಕೃತ್ಯವೆಸಗಿದ್ದಾರೆ. ದರೋಡೆ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

