BREAKING : ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ಶೀಘ್ರವೇ ‘ಕಾವೇರಿ’ ನೀರಿನ ದರ ಏರಿಕೆ..!

ಬೆಂಗಳೂರು : ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ಕಾವೇರಿ ನೀರಿನ ದರ ಏರಿಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ಜಲಮಂಡಳಿಯ ಪಂಪ್ ಹೌಸ್ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಡಿಸಿಎಂ ಡಿಕೆಶಿ ಮಾತನಾಡಿದರು.

ಶೀಘ್ರವೇ ಕಾವೇರಿ ನೀರಿನ ದರ ಏರಿಕೆ ಮಾಡಲಾಗುತ್ತದೆ, ಯಾವಾಗಿನಿಂದ ಏರಿಕೆ ಮಾಡಲಾಗುತ್ತದೆ ಎಂಬುದನ್ನು ಮುಂದೆ ಹೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಡಿಸಿಎಂ ಡಿಕೆಶಿ ಇಂದು ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾಗಿರುವ 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ ನಿಟ್ಟಿನಲ್ಲಿ ಕೈಗೊಂಡಿರುವ ಕಾವೇರಿ 5ನೇ ಹಂತದ ಕಾಮಗಾರಿಯನ್ನು ತ್ವರಿಗಗತಿಯಲ್ಲಿ ಮುಗಿಸುವ ನಿಟ್ಟಿನಲ್ಲಿ ಇಂದು ವಿವಿಧೆಡೆ ಪರಿಶೀಲನೆ ನಡೆಸುತ್ತಿದ್ದು ಹಾರೋಹಳ್ಳಿಯಲ್ಲಿ 5ನೇ ಹಂತದ ಜಲರೇಚಕ ಯಂತ್ರಗಾರದ ಪರಿವೀಕ್ಷಣೆ ನಡೆಸಿದರು.

ಬಿಬಿಎಂಪಿ ವ್ಯಾಪ್ತಿಗೆ ಸೇರಿರುವ 110 ಹಳ್ಳಿಗಳಿಗೆ ಕಾವೇರಿ ನೀರು ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕೆಂಗೇರಿ ಬಳಿ ನಡೆಯುತ್ತಿರುವ ಪೈಪ್ಲೈನ್ ಅಳವಡಿಕೆ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದೆ. ಕಾವೇರಿ 5ನೇ ಹಂತದ ಯೋಜನೆಯಡಿ ಒಟ್ಟು 110 ಹಳ್ಳಿಗಳಿಗೆ 775 ಎಂಎಲ್ಡಿ ನೀರು ಹರಿಸಲು ಉದ್ದೇಶಿಸಲಾಗಿದೆ. ಇದರಿಂದಾಗಿ ಈ ಭಾಗದಲ್ಲಿ ನೀರಿನ ಬವಣೆ ನೀಗಲಿದೆ ಎಂದರು.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read