ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಮಹಿಳಾ ಟ್ರ್ಯಾಪ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತೀಯ ಮಹಿಳಾ ತಂಡ ಬೆಳ್ಳಿ ಪದಕ ಗೆದ್ದಿದೆ.
ಇಂದು ಏಷ್ಯನ್ ಗೇಮ್ಸ್ ನಲ್ಲಿ ನಡೆದ ಟ್ರ್ಯಾಪ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ಮಹಿಳಾ ಟ್ರ್ಯಾಪ್ ಶೂಟಿಂಗ್ ತಂಡ ಮನೀಷಾ ಕೀರ್, ಪ್ರೀತಿ ರಜಕ್, ರಿಯಾಕುಮಾರಿ ಅವರು ಅದ್ಭುತ ಪ್ರದರ್ಶನ ನೀಡುವ ಮೂಲಕ ಭಾರತಕ್ಕೆ ಬೆಳ್ಳಿ ಪದಕ ಗೆದ್ದು ಕೊಟ್ಟಿದ್ದಾರೆ.
ಇನ್ನು,ಏಷ್ಯನ್ ಗೇಮ್ಸ್ ನಲ್ಲಿ ಮಹಿಳಾ ವೈಯಕ್ತಿಕ ವಿಭಾಗದಲ್ಲಿ ಭಾರತದ ಗಾಲ್ಫ್ ಆಟಗಾರ್ತಿ ಅದಿತಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಅವರು ಏಷ್ಯನ್ ಗೇಮ್ಸ್ ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
https://twitter.com/Media_SAI/status/1708339010891128964?ref_src=twsrc%5Egoogle%7Ctwcamp%5Eserp%7Ctwgr%5Etweet