HomeLatest NewsBREAKING: ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ಕೋಚ್ ಬಸ್ ಗೆ ಬೆಂಕಿ: ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ 36...

BREAKING: ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ಕೋಚ್ ಬಸ್ ಗೆ ಬೆಂಕಿ: ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ 36 ಪ್ರಯಾಣಿಕರು ಪಾರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪ ಅರಸಾಳು ಸೂಡೂರು ಬಳಿ ಖಾಸಗಿ ಸ್ಲೀಪರ್ ಕೋಚ್ ಬಸ್ ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ.

ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಕೂಡಲೇ ಎಚ್ಚೆತ್ತುಕೊಂಡು ರಸ್ತೆ ಬದಿಗೆ ಬಸ್ ನಿಲ್ಲಿಸಿದ್ದಾರೆ. ನಿರ್ವಾಹಕನ ಸಹಾಯದಿಂದ ಬಸ್ ನಿಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಬಸ್ ಡೋರ್ ಹಾಗೂ ತುರ್ತು ನಿರ್ಗಮನ ಬಾಗಿಲು ತೆಗೆದು ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಮಾಹಿತಿ ತಿಳಿದ ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಈ ವೇಳೆಗೆ ಬಸ್ ಸುಟ್ಟು ಕರಕಲಾಗಿದೆ.

ಹಲವು ಪ್ರಯಾಣಿಕರ ಲಗೇಜ್ ಸುಟ್ಟುಹೋಗಿವೆ. ಘಟನೆಯಲ್ಲಿ ಬಸ್ ಚಾಲಕ ಸೇರಿ 4-5 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಟ್ಟೂರಿನಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವರಿ ಬಸ್ ಗೆ ಬೆಂಕಿ ತಗುಲಿದೆ. ಬಸ್ ನಲ್ಲಿದ್ದ 36 ಪ್ರಯಾಣಿಕರು ಪಾರಾಗಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular