HomeLatest NewsBREAKING : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ.!

BREAKING : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ.!

ಬೆಂಗಳೂರು : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ಬಾಳದ ಕನಕನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಬಾವರ್ ಅಸ್ಮಾ (29) ಎಂದು ಗುರುತಿಸಲಾಗಿದೆ. ಕಳೆದ 2 ವರ್ಷಗಳ ಹಿಂದೆ ಬಶೀರ್ ವುಲ್ಲಾ ಎಂಬಾತನನ್ನು ಮದುವೆ ಆಗಿದ್ದರು. ಆದರೆ ಆತನಿಗೆ ಬೇರೆ ಯುವತಿ ಜೊತೆ ಅನೈತಿಕ ಸಂಬಂಧವಿತ್ತು ಎಂಬ ಆರೋಪವಿದೆ.

ಘಟನೆ ಸುತ್ತಾ ಹಲವು ಶಂಕೆ ವ್ಯಕ್ತವಾಗಿದ್ದು, ಅಸ್ಮಾಳನ್ನು ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿ ಬಶೀರ್ ವುಲ್ಲಾನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular