BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ನಾಲ್ವರು ಸಾವು.!

ಕೋಲಾರ : ಇನ್ನೋವಾ ಕಾರಿಗೆ ಬೈಕ್ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಕುಪ್ಪನಹಳ್ಳಿಯಲ್ಲಿ ನಡೆದಿದೆ.

ಕಾರಿನಲ್ಲಿದ್ದ ಮಹೇಶ್, ರತ್ನಮ್ಮ, 2 ವರ್ಷದ ಮಗು ಹಾಗೂ ಬೈಕ್ ಸವಾರ ಮೃತಪಟ್ಟಿದ್ದಾರೆ. ಕಾರು ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದು ನಂತರ ಡಿವೈಡರ್ ಒಂದಕ್ಕೆ ಗುದ್ದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಚೆನ್ನೈ- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read