HomeLatest NewsBREAKING: ಮಲೆಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಸಾವು ಕೇಸ್: ಇಬ್ಬರು ಆರೋಪಿಗಳು ಅರೆಸ್ಟ್

BREAKING: ಮಲೆಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಸಾವು ಕೇಸ್: ಇಬ್ಬರು ಆರೋಪಿಗಳು ಅರೆಸ್ಟ್

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹನೂರು ವಲಯ ಅರಣ್ಯಾಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಹನೂರು ವಲಯದ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪಚ್ಚೆದೊಡ್ಡಿ ತಾಂಡಾ ನಿವಾಸಿಗಳಾದ ಪಚ್ಚೆ ಮಲ್ಲು ಮತ್ತು ಮಂಜುನಾಥ್ ಅವರನ್ನು ಬಂಧಿಸಲಾಗಿದೆ. ಹುಲಿಗೆ ವಿಷಪ್ರಾಶನ ಮಾಡಿ ಕೊಂದಿರುವುದಾಗಿ ವರದಿಯಿಂದ ದೃಢಪಟ್ಟಿದೆ.

ಮಲೆ ಮಹದೇಶ್ವರ ವನ್ಯಧಾಮದ ಹನೂರು ಬಫರ್ ವಲಯ ವ್ಯಾಪ್ತಿಯ ಪಚ್ಚೆದೊಡ್ಡಿ ಗ್ರಾಮದ ಬಳಿ ಹುಲಿಯನ್ನು ಮೂರು ಭಾಗಗಳಾಗಿ ತುಂಡರಿಸಿ ಹತ್ಯೆ ಮಾಡಲಾಗಿತ್ತು. ಗುರುವಾರ ಸಂಜೆ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ನಡೆಸುವಾಗ ಹುಲಿಯ ತಲೆ, ಮುಂಗಾಲಿನ ಭಾಗ ಕಂಡುಬಂದಿದ್ದು, ಶೋಧ ನಡೆಸಿದ ವೇಳೆ ಉಳಿದ ಭಾಗಗಳು ಪತ್ತೆಯಾಗಿದ್ದವು. ಹುಲಿಯ ಉಗುರು ಮತ್ತು ಹಲ್ಲು, ಚರ್ಮವನ್ನು ಹಾಗೆಯೇ ಬಿಡಲಾಗಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಪ್ರಕರಣದ ತನಿಖೆಗೆ ಸೂಚಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular