ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕೂಲಿ ಕಾರ್ಮಿಕ ಮಹಿಳೆ ಅನಿತಾ ಕಾಡಾನೆ ದಾಳಿಗೆ ಬಲಿಯಾದವರು.
ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬನ್ನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೂಲಿಕಾರ್ಮಿಕ ಮಹಿಳೆ ಅನಿತಾ ಕೆಲಸ ಮುಗಿಸಿ ಮನೆಗೆ ಬರುವಾಗ ಕಾಡಾನೆ ದಾಳಿ ನಡೆಸಿದೆ.
ಶಶಿಶೇಖರ ಎಂಬುವವರ ತೋಟದಲ್ಲಿ ಅನಿತಾ ಕುಟುಂಬ ಕೆಲಸಕ್ಕೆ ಬಂದಿತ್ತು. ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಕಾಡಾನೆ ದಾಳಿ ಮಾಡಿದೆ. ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಗಾಯಾಳು ಅನಿತಾ ಸಾವನ್ನಪ್ಪಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:ಕಾಡಾನೆ ದಾಳಿ