BREAKING : ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ ; ಟಿಂಬರ್ ಕಾರ್ಮಿಕ ಸಾವು

ಚಿಕ್ಕಮಗಳೂರು : ಕಾಡಾನೆ ದಾಳಿಗೆ ಟಿಂಬರ್ ಕಾರ್ಮಿಕ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವರ್ತೆಗುಂಡಿಯಲ್ಲಿ ನಡೆದಿದೆ.

ತೋಟಕ್ಕೆ ಆನೆ ಬಂದಿದೆ ಎಂದು ಓಡಿಸಲು ಹೋದ ಟಿಂಬರ್ ಕಾರ್ಮಿಕ ಅಕ್ಬರ್ (36) ಎಂಬುವವರು ಮೃತಪಟ್ಟಿದ್ದಾರೆ. ದಾಳಿಯಿಂದ ಕೆಳಕ್ಕೆ ಬಿದ್ದ ಅಕ್ಬರ್ ನ ಎದೆ ಮೇಲೆ ಆನೆ ಕಾಲಿಟ್ಟು, ದಂತದಿಂದ ತಿವಿದು ಭೀಕರವಾಗಿ ಹತ್ಯೆ ಮಾಡಿದೆ.

ಕಳೆದ 2 ದಿನದ ಹಿಂದೆ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದರು. ಈ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read