HomeKarnatakaBREAKING : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ, ಸ್ಥಳದಲ್ಲೇ ರೈತ ಸಾವು

BREAKING : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ, ಸ್ಥಳದಲ್ಲೇ ರೈತ ಸಾವು

ಮೈಸೂರು : ಕಾಡಾನೆ ದಾಳಿಗೆ ರೈತ ಬಲಿಯಾದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುದಗನೂರು ಗ್ರಾಮದಲ್ಲಿ ನಡೆದಿದೆ.

ಜಮೀನಿನನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿ, ಪರಿಣಾಮ ರೈತ ಸ್ಥಳದಲ್ಲೇ ಮೃತಪಟ್ಟಿದ್ದಾರೆ .  ಮೃತರನ್ನು ರೈತ ಚೆಲುವಯ್ಯ (65) ಎಂದು ಗುರುತಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಗ್ರಾಮದ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ, ರಾಜ್ಯದಲ್ಲಿ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ರೈತರು ತಮ್ಮ ಜಮೀನಿನಲ್ಲಿ ಕೆಲಸ ಮಾಡುವುದಕ್ಕೆ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular