ಶಿವಮೊಗ್ಗ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಕೆಎಸ್ ಆರ್ ಟಿಸಿ ಡಿಪೋದ ಕರ್ತವ್ಯ ನಿರತ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ.
ಮೃತರನ್ನು ಸಾಗರದ ನಿವಾಸಿ ಸಂದೀಪ್ (41) ಎಂದು ಗುರುತಿಸಲಾಗಿದೆ.ನಿನ್ನೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಹೃದಯಾಘಾತ ಕಾಣಿಸಿಕೊಂಡಿದೆ. ಕೂಡ ಲೇ ಅವರನ್ನು ಸಹೋದ್ಯೋಗಿಗಳು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
