ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಬೆಂಗಳೂರಿನ ಹಂಪಿನಗರ ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ.
ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಮಾಲಾ(58) ಸಾವನ್ನಪ್ಪಿದ್ದಾರೆ. ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದಿದ್ದರಿಂದ ತಲೆಗೆ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಯಲಹಂಕದಿಂದ ಹಂಪಿನಗರ ಮಾರ್ಗದಲ್ಲಿ ಸಂಚರಿಸುವ ಬಿಎಂಟಿಸಿ ಡಿಪೋ 16ರ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
